ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

Upayuktha
0

ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2024-25ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಹೆತ್ತವರಿಗಾಗಿ  ಮಾಹಿತಿ ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.


ಇದೇ ಸಂದರ್ಭ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 32 ವಿದ್ಯಾರ್ಥಿಗಳಿಗೆ ಹಾಗೂ 9 ವಿಷಯಗಳಲ್ಲಿ A+ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ, ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಆಯ್ದ 2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.


ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿ ತಂದ ಪ್ರತಿಭಾನ್ವಿತ ವಿದ್ಯಾರ್ಥಿ ಸುಶ್ರೀತ್ ಎಸ್ ಐಲ್ ನನ್ನು ಈ ಸುಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.


2022-23 ನೇ ಸಾಲಿನ ಯುಎಸ್‌ಎಸ್‌ ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಎಲ್ಲಾ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2023-24 ನೇ ಸಾಲಿನ ರಾಷ್ಟ್ರೀಯ ಮಟ್ಟದ NMMS ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಸ್ಕಾಲರ್‌ಶಿಪ್‌ಗೆ ಅರ್ಹತೆ ಪಡೆದ ಈಶಾನ್ ಶರ್ಮ ಈತನನ್ನು ಅಭಿನಂದಿಸಲಾಯಿತು.


ಇದರೊಂದಿಗೆ ಸುಮಾರು 15 ವರ್ಷಗಳ ಕಾಲ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದುತ್ತಿರುವ  ಸುಬ್ರಹ್ಮಣ್ಯ ಭಟ್ ಇವರನ್ನು ಗೌರವಿಸಲಾಯಿತು.


ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು ಇವರು ಸಭಾಧ್ಯಕ್ಷತೆ ವಹಿಸಿದರು. ಮುಖ್ಯೋಪಾಧ್ಯಾಯ ಇ.ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ‌‌ ಮೇನೇಜರ್ ಶಂಕರನಾರಾಯಣ ಭಟ್ ಶುಭ ಹಾರೈಸಿದರು. ಮೂಡಂಬೈಲ್ ಶಾಲೆಯ ಮುಖ್ಯೋಪಾಧ್ಯಾಯ ಜೋರ್ಜ್ ಕ್ರಾಸ್ತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶುಭ ಕೋರಿದರು. ಪ್ರಾಂಶುಪಾಲ ರಾಮಚಂದ್ರ ಭಟ್ ಎಂ., ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ಪಿ.ಟಿ.ಎ ಉಪಾಧ್ಯಕ್ಷ ವೇಣುಗೋಪಾಲ ಶೆಟ್ಟಿ‌, ಶಿಕ್ಷಕಿ ಶ್ರೀಮತಿ ಉಮಾದೇವಿ ಶುಭನುಡಿಗಳನ್ನಾಡಿದರು.


ಶ್ರೀಮತಿ ಸುನಿತಾ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಪ್ರಶಾಂತ್ ಹೊಳ್ಳ ಎನ್ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top