ತಂತ್ರಜ್ಞಾನದ ಬಳಕೆಯ ವಿಧಾನದ ಮೇಲೆ ಅದರ ಒಳಿತು ಕೆಡುಕು ನಿರ್ಧಾರ: ಡಾ.ರಾಘವೇಂದ್ರ ಎಸ್

Upayuktha
0



ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2024 ಕ್ಕೆ ಚಾಲನೆ ನೀಡಿ ಮಾತಾಡಿದರು. ಯಾವುದೇ ತಂತ್ರಜ್ಞಾನಕ್ಕೆ ಅದರದ್ದೇ ಆದ ಮಿತಿ ಇರುತ್ತದೆ. ಹಾಗಾಗಿ ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತವಾಗದೆ ಅದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ.ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಹೆಸರಿಗೆ ತಕ್ಕಂತೆ ಜ್ಞಾನದ ಸಂಗಮ ಇಲ್ಲಿ ನಡೆಯುತ್ತಿದೆ. ಶಿಸ್ತಿನ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶದ ಆಸ್ತಿಯಾಗುವ ರೀತಿಯಲ್ಲಿ ಇಲ್ಲಿ ವಿದ್ಯಾದಾನ ನಡೆಯುತ್ತಿದೆ ಇದು ನಮ್ಮ ವಿದ್ಯಾಸಂಸ್ಥೆಗಳ ಗುರಿಯಾಗಿದೆ ಎಂದರು. ಹೊಸ ವಿಷಯಗಳು ಸಂಶೋಧನೆಗಳಿಗೆ ದಾರಿ ಮಾಡಿಕೊಡುತ್ತವೆ  ಪ್ರಸಕ್ತ ಸನ್ನಿವೇಶದಲ್ಲಿ ತನ್ನಲ್ಲಿರುವ ಜ್ಞಾನವೆಷ್ಟು ಎಂದು ನಿರ್ಧರಿಸಿ ಬೇಕಾದ ಪೂರಕ ವಿಷಯಗಳನ್ನು ಕಲಿಯುತ್ತಾ ತಮ್ಮಲ್ಲಿರುವ ಕಲ್ಪನೆಗಳನ್ನು ಸಾಕಾರಗೊಳಿಸಿ ಉನ್ನತಿಯನ್ನು ಗಳಿಸಿ ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಶುಭ ಹಾರೈಸಿದರು.


ಇಲ್ಲಿ ಮಂಡಿಸಲಾಗುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿದ ಸಂಚಿಕೆಯನ್ನು ಅತಿಥಿಗಳು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.


ಜ್ಞಾನ ಸಂಗಮ 2024ರ ಸಂಯೋಜಕರುಗಳಾದ ಪ್ರೊ.ರಜನಿ ರೈ ಸ್ವಾಗತಿಸಿ, ಪ್ರೊ.ಭಾರತಿ ವಂದಿಸಿದರು. ವಿದ್ಯಾರ್ಥಿಗಳಾದ ಸ್ನೇಹಾ.ಬಿ ಹಾಗೂ ಆಕರ್ಷ್ ರೈ.ಎಂ ಕಾರ್ಯಕ್ರಮ ನಿರ್ವಹಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top