ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ: ಸೌಮ್ಯ ಬೋನಂತಾಯ

Upayuktha
0

 


ಪುತ್ತೂರು: ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ. ವೃತ್ತಿ ಜೀವನದಲ್ಲಿ ನಮ್ಮನ್ನು ನಾವು ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನವಾದರೆ ಮಾತ್ರ ನಾವು ಕಾರ್ಪೊರೇಟ್ ಹಂತದಲ್ಲಿ ಗೆಲ್ಲಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ತನ್ನ ಜೀವನದಲ್ಲಿ ಕೌಶಲ್ಯ ಅಭಿವೃದ್ಧಿಗೆ ಬೇಕಾದಂತಹ ಅಂಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಎಎಂಡಿ ಸಂಸ್ಥೆ, ಟೆಕ್ಸಾಸ್ ಯು,ಎಸ್ ಎ ಕಾರ್ಯಪಡೆಯ ಯೋಜನಾ ವ್ಯವಸ್ಥಾಪಕಿ ಸೌಮ್ಯ ಬೋನಂತಾಯ ಹೇಳಿದರು.


ಇವರು ಗುರುವಾರ ನಡೆದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ  ಸ್ವಾಯತ್ತ ಪುತ್ತೂರು,  ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ಕ್ಯಾಂಪಸ್ ಟು ಕಾರ್ಪೊರೇಟ್ ಟಿಪ್ಸ್ ಆಂಡ್ ಟ್ರಿಕ್ಸ್  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ವಿದ್ಯಾರ್ಥಿಗಳಿಗೆ ಹಲವಾರು ವಿಷಯಗಳು ತಿಳಿದಿರುವುದಿಲ್ಲ. ಇಂಥಹ ಕಾರ್ಯಾಗಾರಗಳು ವಿದ್ಯಾರ್ಥಿಗಳ  ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಹೆಚ್ಚು ಹೆಚ್ಚು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸಬೇಕು ಎಂದು ನುಡಿದರು.

 

ವೇದಿಕೆಯಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಅಧ್ಯಾಪಕ ರಾಘವೇಂದ್ರ ಉಪಸ್ಥಿತರಿದ್ದರು. 


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಕೇಶ್ ಪ್ರಸಾದ್ ಕೆ ಸ್ವಾಗತಿಸಿ, ಜಿನ್ನಪ್ರಕಾಶ್ ವಂದಿಸಿ,  ಪುಣ್ಯಶ್ರೀ ನಿರೂಪಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top