ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರು ಆಂದ್ರಪ್ರದೇಶದ ಕುಪ್ಪಂ ನ  ದ್ರಾವಿಡಿಯನ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ  "Synthesis and Characterizations of some bioactive molecules: Triazolopyrimidine, Quinoline,Benzisoxalzole and Benzimidazole Derivatives"  ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.


ಇವರು ಉಜಿರೆಯ ಎಸ್ ಡಿಎಂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ.

     

ಪ್ರೊ.ಕೃಷ್ಣ ಕಾರಂತ್ ಇವರು ಸುಮಾರು 34 ವರ್ಷಗಳಿಂದ ರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಿದ್ದಾರೆ. ಪುತ್ತೂರು ತಾಲೂಕಿನ ಕಾಂಚನ ನಿವಾಸಿ ದಿ.ವಿಷ್ಣು ಕಾರಂತ ಹಾಗೂ ದಿ.ಗೌರಿ ಕಾರಂತ ಇವರ ಪುತ್ರರಾಗಿದ್ದು ಪ್ರಸ್ತುತ ಪುತ್ತೂರಿನ ಕಾರ್ಜಲ್ ಬಯಂಬೆಯಲ್ಲಿ ವಾಸ್ತವ್ಯವಾಗಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top