ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ, ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದಗಳೊಂದಿಗೆ ರಾಗ ಧನ ಸಂಸ್ಥೆ (ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಗರತ್ನಮಾಲಿಕೆ ಸರಣಿಯ 25ನೇ ಕಾರ್ಯಕ್ರಮ ಜೂನ್ 02ರಂದು ಭಾನುವಾರ ಉಡುಪಿಯ ರಾಜಾಂಗಣದಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪ್ರಣವಶ್ರೀ ಯಶಸ್ವಿ ಸುಬ್ಬರಾವ್ ಮತ್ತು ಇವರ ಶಿಷ್ಯ ಚಿರಂಜೀವಿ ಮೋಕ್ಷಿತ್ ಯಸ್ ಬೆಂಗಳೂರು ಇವರ ದ್ವಂದ್ವ ವಯೊಲಿನ್ ವಾದನ ಕಚೇರಿ ನಡೆಯಲಿದೆ. ಮೃದಂಗದಲ್ಲಿ ಡಾ. ಅಕ್ಷಯ ನಾರಾಯಣ ಕಾಂಚನ, ಘಟಂನಲ್ಲಿ ಯಸ್. ಮಂಜುನಾಥ್ ಮೈಸೂರು ಸಹಕರಿಸಲಿದ್ದಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ವಿದುಷಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ