ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವೃದ್ಧಿ ಎ ಕೊಂಡೆ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಅಶೋಕ್ ಬಿ ಕೊಂಡೆ ಮತ್ತು ಮಧುರ ದಂಪತಿಗಳ ಪುತ್ರಿ.
ದ್ವಿತೀಯ ಸ್ಥಾನಿಯಾದ ಮಾನ್ಯ ಆರ್ ಶೆಟ್ಟಿ, ರವೀಂದ್ರ ದರ್ಬೆ ಮತ್ತು ಹರಿಣಿ ದಂಪತಿಗಳ ಪುತ್ರಿ. ತೃತೀಯ ಸ್ಥಾನವನ್ನು ಪಡೆದುಕೊಂಡಿರುವ ಪ್ರೇಕ್ಷಾ, ಕೆ. ಆನಂದ ಕುಲಾಲ್ ಮತ್ತು ಸುಶೀಲ ಎ ದಂಪತಿಗಳ ಪುತ್ರಿ.
ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಶಾಲೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


