ಇಬ್ಬರು ಎ+, ಮೂವರು ಎ ಶ್ರೇಣಿಯಲ್ಲಿ ತೇರ್ಗಡೆ
ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 93.10 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ 27 ಮಂದಿ ಉತ್ತೀರ್ಣರಾಗಿದ್ದಾರೆ.
ಆಸುರ 612 (97.92%) ಅಂಕ, ಪ್ರತೀಕ್ಷಾ 586 (93.76%) ಅಂಕಗಳೊಂದಿಗೆ ಎ+ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮೇಘಶ್ರೀ 558 (89.28%), ಲಿಖಿತ್ 548 (87.68%), ಆಶಿತ 545 (87.2%) ಅಂಕಗಳೊಂದಿಗೆ ಎ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನು, ಇಬ್ಬರು ಬಿ+, ಮೂವರು ಬಿ, 8 ಮಂದಿ ಸಿ+, 9 ಮಂದಿ ಸಿ ಗ್ರೇಡ್ ಪಡೆದಿದ್ದಾರೆ. ಮೇಘಶ್ರೀ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ, ಆಸುರ ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ.
ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರಿಗೆ ಸಂಚಾಲಕರು, ಆಡಳಿತ ಮಂಡಳಿ ಅಧ್ಯಕ್ಷರು, ಆಡಳಿತಾಧಿಕಾರಿ ಹಾಗೂ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ