ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪುತ್ತೂರು ಇಲ್ಲಿನ ಭೌತಶಾಸ್ತ್ರ ವಿಭಾಗದ ಪ್ರಯೋಗಾಲಯ ಮತ್ತು ಕಾಲೇಜಿನ ಕಚೇರಿಯ ಉದ್ಘಾಟನೆಯು ಮೇ17 ರಂದು ನಡೆಯಿತು.
ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳಾದ ರೆ.ಫಾ. ಆ್ಯಂಟನಿ ಮೈಕೇಲ್ ಶೇರ ಅವರು ಪವಿತ್ರ ಜಲವನ್ನು ಸಿಂಪಡಿಸುವ ಮೂಲಕ ಆಶೀರ್ವಚನವನ್ನು ನೀಡಿ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್,
ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ.ಸ್ಟ್ಯಾನಿ ಪಿಂಟೋ, ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ಆ್ಯಂಟನಿ ಪ್ರಕಾಶ್ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ' ಕೋಸ್ಟಾ , ವಿದ್ಯಾರ್ಥಿ ವಸತಿ ನಿಲಯದ ಪಾಲಕರಾದ ಫಾ. ರೂಪೇಶ್ ತಾವ್ರೋ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಉಪನ್ಯಾಸಕಿ ಸುಮನಾ ರಾವ್ ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ.ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ , ಉಪನ್ಯಾಸಕಿ ಸುಮ ಡಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ