ಜೂ.1: ಸರೋಜಿನಿ ಮಧುಸೂದನ ಕುಶೆ ಶಾಲೆಯಲ್ಲಿ `ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ

Chandrashekhara Kulamarva
0


ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರೋಜಿನಿ ಮಧುಸೂದನ ಕುಶೆ ಶಾಲೆ ಇವರ ಜಂಟಿ ಆಶ್ರಯದಲ್ಲಿ 2024-25 ಸಾಲಿನ ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ ಜೂನ್ 1 ಶನಿವಾರ 11 ಗಂಟೆಗೆ ನಡೆಯಲಿದೆ. ಕಾರ್‍ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸುವರು. ಈ ಸಾಹಿತ್ಯ ಅಭಿರುಚಿ 101 ಕಾರ್‍ಯಕ್ರಮಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರೊ. ಶ್ರೀನಾಥ ಅವರು ಚಾಲನೆ ನೀಡುವರು.


ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಗೋವಿಂದದಾಸ್ ಕಾಲೇಜ್ ಸುರತ್ಕಲ್ ಪ್ರಾಂಶುಪಾಲ ಪ್ರೊ. ಕೃಷ್ಣ ಮೂರ್ತಿ, ನಿವೃತ್ತ ಪ್ರಾಧ್ಯಾಪಕ ಪ್ರೊ. ಡಾ. ಮೀನಾಕ್ಷಿ ರಾಮಚಂದ್ರ, ಗೌರವ ಉಪನ್ಯಾಸಕ ವ. ಉಮೇಶ್ ಕಾರಂತ ಹಾಗೂ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರೊಪೆಸರ್, ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ, ಅತ್ತಾವರ ನಗರ ನಿವಾಸಿಗಳ ಸಂಘದ ಅಧ್ಯಕ್ಷ ಉಮೇಶ್ ರಾವ್ ಕುಂಬ್ಳೆ ಉಪಸ್ಥಿತರಿರುವರು.


ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಸರೋಜಿನಿ ಮಧುಸೂದನ ಕುಶೆ ಶಾಲೆ ಪ್ರಾಂಶುಪಾಲರಾದ ಬಿಂದುಸಾರ ಶೆಟ್ಟಿ ವಹಿಸಿದರು. ಶಿಕ್ಷಕಿ ಸುರೇಖಾ ಯಾಳವಾರ, ಅಮೃತಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಡಾ. ಅರುಣಾ ನಾಗರಾಜ ಜೊತೆಗಿರುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top