ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ; ಉಚಿತ ಪಠ್ಯ ಪುಸ್ತಕಗಳ ವಿತರಣೆ

Upayuktha
0

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ಜರುಗಿತು. ಶಾಲಾ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.


ಬಳಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸರಬರಾಜು ಮಾಡಲಾದ ಉಚಿತ ಪಠ್ಯಪುಸ್ತಕಗಳನ್ನು ಅವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಜಯಾನಂದ ಉಳಯ, ಎ. ಗೋವಿಂದರಾಯ ಶೆಣೈ ಹಾಗೂ ಕೆ. ಸದಾಶಿವ ಹೊಳ್ಳ ಅವರು ಉಪಸ್ಥಿತರಿದ್ದು ಮಾತನಾಡಿದರು.


ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಬಸ್ ವ್ಯವಸ್ಥೆಯ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ಕನ್ನಡ ಅಧ್ಯಾಪಕರಾದ ಶಿವಕುಮಾರ್ ಸಾಯ ಅವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಅವರು ವಂದಿಸಿದರು.


ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲೆಯನ್ನು ತಳಿರು ತೋರಣಗಳು, ಬಣ್ಣ ಬಣ್ಣದ ಬಲೂನ್‌ಗಳಿಂದ ಅಲಂಕರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮಧ್ಯಾಹ್ನ ಬಿಸಿಯೂಟದೊಂದಿಗೆ ಪಾಯಸದ ಔತಣವನ್ನು ವಿದ್ಯಾರ್ಥಿಗಳಿಗೆ ಉಣಬಡಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


إرسال تعليق

0 تعليقات
إرسال تعليق (0)
To Top