ಕಾರವಾರ ಕ್ರೀಡಾ ವಸತಿನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ

Upayuktha
0


ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 5 ನೇ ಹಾಗೂ 8 ನೇ ತರಗತಿಗಳ ಪ್ರವೇಶಾತಿಗೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ವಿಭಾಗಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಈ ಕೆಳಕಂಡ ದಿನಗಳಂದು ನಡೆಸಲಾಗುವುದು.


ಮೇ 29 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಮೇ 30 ರಂದು ಉಡುಪಿಯ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಮೇ 31 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಲಾದೇವಿ ತಾಲೂಕು ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು,  4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಪ್ರಸ್ತುತ ಶೈಕ್ಷಣಿಕ ಸಾಲಿನ ಜೂನ್ ಒಂದಕ್ಕೆ 11 ಮತ್ತು 14 ವರ್ಷಗಳನ್ನು ಮೀರದ ಬಾಲಕರಿಗೆ ಪ್ರವೇಶಾವಕಾಶ ನೀಡಲಾಗುವುದು.


ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top