ಮಂಗಳೂರು: ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ, ಶೋಷಣೆ, ಸೇರಿದಂತೆ ಸರಣಿ ಕೊಲೆಗಳೇ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ಇದರ ಬಗ್ಗೆ ಗಮನವೇ ಹರಿಸದೇ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಆಳುವ ಸರ್ಕಾರ ನಿಷ್ಕ್ರಿಯಗೊಂಡಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಯಾರು ಯಾರನ್ನು ಬೇಕಾದರೂ ಹಾಡಹಗಲೇ ಕೊಲ್ಲುವ ವಾತಾವರಣ ಸೃಷ್ಟಿಯಾಗಿದೆ. ಅಮಾಯಕ ಹೆಣ್ಣುಮಕ್ಕಳು ರಾಕ್ಷಸೀ ಮನಸ್ಥಿತಿಯವರಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಪ್ರಕರಣ, ಕೊಡಗಿನ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ, ಇದೀಗ ಅಂಜಲಿ ಎಂಬ ಯುವತಿಯ ಹತ್ಯೆ, ಹೀಗೆ ಸರಣಿ ಆತಂಕಕಾರಿ ಘಟನೆಗಳು ನಡೆಯುತ್ತಿದ್ದರೂ ಯಾಕೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಇಂತಹ ಕೃತ್ಯಗಳು ದೇಶದೆಲ್ಲೆಡೆ ನಮ್ಮ ಕರುನಾಡು "ಹೆಣ್ಣುಮಕ್ಕಳ ಪಾಲಿಗೆ ಅಸುರಕ್ಷಿತ" ಎಂಬ ಭಾವನೆ ಮೂಡಿಸಿ ರಾಜ್ಯದ ಘನತೆಗೆ ಧಕ್ಕೆ ತರುತ್ತದೆ. ಈ ಕೂಡಲೇ ಈ ಎಲ್ಲಾ ಘಟನೆಗಳ ಹಂತಕರನ್ನು ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು, ಆ ಮೂಲಕ ರಾಜ್ಯದಲ್ಲಿ ದುಷ್ಟರ ಅಟ್ಟಹಾಸ ಕೊನೆಗೊಂಡು ನೆಮ್ಮದಿಯ ವಾತಾವರಣ ಸೃಷ್ಟಿಯಾಗಬೇಕೆಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ