ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳಾದ ಸುಮೇಧಾ ಗಾಂವ್ಕರ್ ಅವರು ಶ್ರೀ ಶಂಕರರ ಜೀವನ ಸಾಧನೆಗಳ ಬಗ್ಗೆ ಹಾಗೂ ಗುರುದತ್ತ ಮರಾಠೆ ಅವರು ಶ್ರೀ ಶಂಕರರ ಕೃತಿಗಳು ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.
ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಇವರು ಶ್ರೀ ಶಂಕರರ ಬಗ್ಗೆ ಪ್ರಸ್ತಾವಿಕ ಮಾತನಾಡಿ ನಿರ್ವಹಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ಅವರು ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ