ಮಂಗಳೂರು: ಶಿವಳ್ಳಿ ಸ್ಪಂದನದ ಕ್ರೀಡೋತ್ಸವ ಮೇ 12ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಮಹಿಳೆಯರು, ಮಕ್ಕಳು, ಯುವಕರು, ಹಿರಿಯರಿಗೂ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಬೆಳಗ್ಗೆ 7.45ಕ್ಕೆ ಕಟೀಲು ವಾಸುದೇವ ಆಸ್ರಣ್ಣ ಉದ್ಘಾಟಿಸಲಿದ್ದು, ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಕೊಡೆತ್ತೂರುಗುತ್ತು ಸನತ್‌ಕುಮಾರ್ ಶೆಟ್ಟಿ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಣೆ, ಪ್ರತಿಭಾನ್ವಿತರಿಗೆ ಸನ್ಮಾನ ನಡೆಯಲಿದೆ ಎಂದು ಶಿವಳ್ಳಿ ಸ್ಪಂದನ ಕಾರ್ಯದರ್ಶಿ ಉದಯಶಂಕರ ಬಿ. ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


