ಮೈಸೂರು: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳಗಂಗೋತ್ರಿ ಕೊಣಾಜೆ ಇದರ ಸಮಾಜ ಕಾರ್ಯ ಗ್ರಾಮೀಣ ಅಧ್ಯಯನ ಶಿಬಿರವು "ಕಡಲ ಮಕ್ಕಳ ಚಿತ್ತ ಹಾಡಿಯತ್ತ" ಎಂಬ ಶೀರ್ಷಿಕೆಯಡಿಯಲ್ಲಿ ಬಸವನಗಿರಿ ಹಾಡಿಯ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಬುಧವಾರದಂದು ಉದ್ಘಾಟನೆಗೊಂಡಿದ್ದು, ಐದನೇ ದಿನದ ಶಿಬಿರದಲ್ಲಿ ವಿದ್ಯಾರ್ಥಿಗಳು ಬಸವನಗಿರಿ ಹಾಡಿಯಲ್ಲಿ ಕ್ರೀಡೋತ್ಸವವನ್ನು ಹಮ್ಮಿಕೊಂಡಿದ್ದರು.
ಚಕ್ಕೊಡನಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಕಾಳಮ್ಮ ಕ್ರೀಡಕೂಟವನ್ನು ಉದ್ಘಾಟಿಸಿದರು. ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ಮಾಜಿ ಹಿಂದಿ ಶಿಕ್ಷಕ ಉಮೇಶ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿದರು. ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಪಂಚಾಯತ್ ಸದಸ್ಯ ಕೃಷ್ಣ, ಎಚ್.ಡಿ.ಕೋಟೆ ರೈತ ಉತ್ಪಾದನಾ ಸಂಘದ ಅಧ್ಯಕ್ಷ ಕಾಳ ಕಲ್ಕಾರ್ ಹಾಗೂ ಮಂಗಳೂರು ವಿ.ವಿ. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ.ಶರತ್ ಕುಮಾರ್, ಉಪನ್ಯಾಸಕಿ ಡಾ.ಉಷಾರಾಣಿ ಮತ್ತು ಸಂಶೋಧನಾ ವಿದ್ಯಾರ್ಥಿ ಪ್ರಜ್ವಲ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ