ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆ: ಎಸ್‌ಡಿಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಾಧನೆ

Upayuktha
0



ಉಜಿರೆ: ಜನವರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 2023-2024ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಏಳು ವಿದ್ಯಾರ್ಥಿಗಳು ಮತ್ತು ಮೂವರು ಅಧ್ಯಾಪಕರು ತೇರ್ಗಡೆ ಹೊಂದಿದ್ದಾರೆ.

ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ಪ್ರಮುಖವಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ದ್ವಿತೀಯ ಪತ್ರಿಕೋ ದ್ಯಮ ವಿದ್ಯಾರ್ಥಿ ಶಾಮ್ ಪ್ರಸಾದ್ ಎಚ್ ಪಿ, ಬಿ. ವೊಕ್ ವಿಭಾಗದ ಅಧ್ಯಾಪಕರಾದ ಇಂದುಧರ್ ಕಿಣಿ, ರಸಾಯನ ಶಾಸ್ತ್ರ ವಿಷಯದಲ್ಲಿ ಅಧ್ಯಾಪಕ ಡಾ. ನವೀನ್ ಜೈನ್, ಜೀವ ವಿಜ್ಞಾನ ವಿಷಯದಲ್ಲಿ ಅಧ್ಯಾಪಕಿ ಮಂಜುಶ್ರೀ, ವಾಣಿಜ್ಯಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳಾದ ಶ್ರಾವ್ಯ, ಮನೋಜ್, ಸಂಪ್ರಿತಾ, ಸ್ವಾತಿ ಕೆ. ಎ, ಶಿವಪ್ರಸಾದ್, ಶಾಲಿನಿ, ತೇರ್ಗಡೆ ಹೊಂದಿ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳು ಮತ್ತು ಆಧ್ಯಾಪಕರ ಈ ಸಾಧನೆಯನ್ನು ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಮತ್ತು ಕಾಲೇಜಿನ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top