ತೆಂಕನಿಡಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ, ಯೂತ್‌ರೆಡ್‌ಕ್ರಾಸ್ ಹಾಗೂ ಇನ್ನರ್ ವೀಲ್ ಕ್ಲಬ್ ಉಡುಪಿ, ಅಭಿನೇತ್ರ ಐ ಕೇರ್ ಹಾಗೂ ಓಕುಡೆ ಡಯಾಗ್ನೊಸ್ಟಿಕ್ ಸೆಂಟರ್ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಯಿತು.
ಶಿಬಿರ ಉದ್ಘಾಟಿಸಿದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಬಿಸಿಲ ಬೇಗೆಯ ಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸುವ ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಅಗತ್ಯ. ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢರಾಗಿರುವುದು ಕುಟುಂಬಕ್ಕೂ - ಸಮಾಜಕ್ಕೂ ಒಳಿತೆಂದರು. ಉಪಸ್ಥಿತರಿದ್ದ ಕಣ್ಣಿನ ತಜ್ಞ ಡಾ. ಅಭಿನಯ್ ಶುಭ ಹಾರೈಸಿದರೆ, ಇನ್ನರ್ ವೀಲ್ ಕ್ಲಬ್ ಉಡುಪಿ ಇದರ ಅಧ್ಯಕ್ಷರಾದ ಸತ್ಯವತಿ ಹೆಬ್ಬಾರ್ ವಿದ್ಯಾರ್ಥಿಗಳಿಗೆ ಆರೋಗ್ಯದ ಕುರಿತಾದ ಕಾಳಜಿ ವಹಿಸುವಂತೆ ಸೂಚಿಸುತ್ತಾ ಇನ್ನರ್ ವೀಲ್ ಕ್ಲಬ್‌ನ ಚಟುವಟಿಕೆಗಳ ಪರಿಚಯ ಮಾಡಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ಯೂತ್ ರೆಡ್‌ಕ್ರಾಸ್ ಸಂಚಾಲಕರಾದ ಪ್ರಶಾಂತ್ ನೀಲಾವರ, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಯೂತ್‌ರೆಡ್‌ಕ್ರಾಸ್ ವಿದ್ಯಾರ್ಥಿ ಪ್ರತಿನಿಧಿಗಳಾದ ವೃಂದಾ, ವಿನಿಶಾ ಉಪಸ್ಥಿತರಿದ್ದರು. ಶಿಬಿರದಲ್ಲಿ 200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಣ್ಣಿನ ಪರೀಕ್ಷೆ, ರಕ್ತದೊತ್ತಡ, ಹಿಮೋಗ್ಲೋಬಿನ್, ಡಯಾಬಿಟಿಸ್ ಇತ್ಯಾದಿ ಪರೀಕ್ಷೆಗಳ ಜೊತೆಗೆ ರಕ್ತದ ವರ್ಗೀಕರಣ ಮಾಡಿಸಿಕೊಂಡರು. ಅಭಿನಯ ಐ ಕೇರ್ ಹಾಗೂ ಓಕುಡೆ ಡಯಾಗ್ನಾಸ್ಟಿಕ್ ಸೆಂಟರ್‌ನ ವೈದ್ಯಕೀಯ ಸಿಬಂದಿಗಳು ಶಿಬಿರವನ್ನು ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ