ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಖ್ಯಾತ ತುಳು ಚಿತ್ರನಟ ಅರವಿಂದ ಬೋಳಾರ್ ಭೇಟಿ

Chandrashekhara Kulamarva
0


ಪುತ್ತೂರು: ಖ್ಯಾತ ತುಳು ಚಿತ್ರನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಪುತ್ತೂರಿನ ನೆಹರುನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರೊಂದಿಗೆ ಸಂವಾದ ನಡೆಸಿದ ಅವರು ತಮ್ಮ ಮಾತುಗಳಿಂದ ಕಾಲೇಜು ಸಿಬ್ಬಂದಿಗಳನ್ನು ನಗೆಗಡಲಲ್ಲಿ ತೇಲಿಸಿದರು. 


ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್ ವಿ.  ಮಾತುಗಳನ್ನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ದೇವೀಚರಣ್ ರೈ ಎಂ. ವಂದಿಸಿದರು. ಕಲಾವಿದ ಬಿ. ಕೆ. ಶೆಟ್ಟಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top