ಉಡುಪಿ: ಶಿಕ್ಷಣ ಅಂದರೆ ಬರೇ ಅಂಕಗಳಿಗೆ ಮಾತ್ರವಲ್ಲ ಇದರ ಜೊತೆಗೆ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಇಚ್ಛಾ ಶಕ್ತಿ; ಕೌಶಲಶಕ್ತಿ; ಜ್ಞಾನ ಶಕ್ತಿ ವಿದ್ಯಾರ್ಥಿಗಳಲ್ಲಿ ಮೂಡಿಸುವುದೆ ನಿಜವಾದ ಶಿಕ್ಷಣ. ಇಂತಹ ಪರಿಪೂರ್ಣ ವ್ಯಕ್ತಿತ್ವದ ಬೆಳವಣಿಗೆ ಪೂರಕವಾದ ಶಿಕ್ಷಣ ನೀಡುವಲ್ಲಿ ಉಡುಪಿ ಎಂಜಿಎಂ ಕಾಲೇಜು ಮುಂಚೂಣಿಯಲ್ಲಿ ನಿಂತಿದೆ ಎಂದು ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಕಾಶ್ಚಂದ್ರ ಶೆಟ್ಟಿ ಅಭಿಪ್ರಾಯಿಸಿದರು.
ಉಡುಪಿ ಎಂಜಿಎಂ ಕಾಲೇಜಿನ 75ರ ವಾರ್ಷಿಕ ಸಮಾರಂಭ ಮತ್ತು ಸಂಸ್ಥಾಪಕರ ದಿನಾಚರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ತನ್ನ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು.
"ಇಂಗ್ಲಿಷ್ ಕನ್ನಡ ಮಾಧ್ಯಮ ಅನ್ನುವ ಭಾಷಾ ಕೀಳರಿಮೆ ಬೇಡ ಎರಡು ಭಾಷೆಗಳಲ್ಲಿ ಸುಲಲಿತವಾಗಿ ಮಾತನಾಡಬಲ್ಲ ಸಾಮರ್ಥ್ಯ ಇಂದಿನ ನಮ್ಮ ವಿದ್ಯಾರ್ಥಿಗಳಲ್ಲಿ ಇದೆ" ಎಂದು ಪ್ರಕಾಶ್ಚಂದ್ರ ಶೆಟ್ಟಿ ಅಭಿಪ್ರಾಯಿಸಿದರು.
ಸಭಾಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅಧ್ಯಕ್ಷ ಡಾ.ಎಚ್.ಎಸ್. ಬಲ್ಲಾಳ್ ವಹಿಸಿ ಕಾಲೇಜಿನ ಸಂಸ್ಥಾಪಕರಾದ ದಿ. ಡಾ.ಟಿ.ಎಂ.ಪೈ ಅವರ ದೂರದರ್ಶಿತ್ವ ಮತ್ತು ಪರಿಶ್ರಮದ ಫಲವಾಗಿ ಉಡುಪಿ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಪರಿಸರದಲ್ಲಿ ಪ್ರಪ್ರಥಮವಾಗಿ ಸ್ಥಾಪನೆಯಾಗಲು ಸಾಧ್ಯವಾಯಿತು. ದಿ. ಡಾ. ಟಿ.ಎಂ.ಎ.ಪೈ ಅವರ ಬದುಕು ಸಾಧನೆ ಚಿಂತನೆ ನಮಗೆಲ್ಲರಿಗೂ ಆದರ್ಶಪ್ರಾಯವೆಂದು ನೆನಪಿಸಿಕೊಂಡರು. ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸಂಮಾನಿಸಿ ಅಭಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷೀನಾರಾಯಣ ಕಾರಂತ ವಾಷಿ೯ಕ ವರದಿ ವಾಚಿಸಿದರು. ಅತಿಥಿಗಳಾಗಿ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ, ಕಾಲೇಜಿನ ಟಿ. ಮೇೂಹನದಾಸ ಪೈ ಸ್ಮಾರಕ ಕೌಶಲ್ಯಾಭಿವೃದ್ದಿ ಕೇಂದ್ರದ ನಿದೇ೯ಶಕ ಟಿ.ರಂಗ ಪೈ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಪತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅರುಣಕುಮಾರ್ ಬಿ.ಸ್ವಾಗತಿಸಿದರು. ಕಾಮರ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಪ್ರೊ. ಮಮತ ಡಾ.ಟಿ.ಎಂ.ಎ. ಪೈ ಸಂಸ್ಮರಣಾ ಉಪನ್ಯಾಸ ನೀಡಿದರು. ಈ ಶೈಕ್ಷಣಿಕ ವರ್ಷದಲ್ಲಿ ವಿ.ವಿ. ಮಟ್ಟದಲ್ಲಿ ರ್‍ಯಾಂಕ್ ವಿಜೇತರನ್ನು ವಿಶೇಷವಾಗಿ ಸಂಮಾನಿಸಲಾಯಿತು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಎಂ. ವಿಶ್ವನಾಥ ಪೈ ವಂದನಾರ್ಪಣೆಗೈದರು. ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ