ಉಡುಪಿ: ಮಂಗಳೂರು ವಿಶ್ವ ವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಇವರ ಆಶ್ರಯದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಮೇ 1 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ.
ಶಿಬಿರದ ಚಟುವಟಿಕೆಗಳ ಉದ್ಘಾಟಣೆಯನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಹಾತ್ಮಗಾಂಧಿ ಸ್ಮಾರಕ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್ ನಾಯ್ಕರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಣಿಪಾಲ ಆಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಾರ್ಯದಶಿ ಬಿ.ಪಿ. ವರದರಾಯ್ ಪೈ, ಮಹಾತ್ಮಗಾಂಧಿ ಸ್ಮಾರಕ ಕಾಲೇಜಿನ ಪ್ರಾಂಶುಪಾಲ ಪ್ರೋ. ಲಕ್ಷ್ಮೀ ನಾರಾಯಣ ಕಾರಂತ, ಮಹಾತ್ಮಗಾಂಧಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ರೆಡ್‌ಕ್ರಾಸ್ ಗೌರವ ಖಜಾಂಚಿ ರಮಾದೇವಿ ಮತ್ತು ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರುರವರು ಉಪಸ್ಥಿತರಿರುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ