ತೆಂಕನಿಡಿಯೂರು ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ

Upayuktha
0


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ 2023-24ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ಉದ್ಘಾಟನೆ ಗರಡಿಮಜಲಿನ ಸಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. 


ಕಾರ್ಯಕ್ರಮದ ಉದ್ಘಾಟನೆಯನ್ನು ದಿವಾಕರ ಶೆಟ್ಟಿ ಕೊಡವೂರು ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರಾದ ವಿಶ್ವನಾಥ ಕರಬ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿದ್ಯಾಸರಸ್ವತಿ,  ಗಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿಗಳಾದ ಡಾ. ರಘು ನಾಯ್ಕ, ಶ್ರೀಮತಿ ಮಮತಾ ಭಾಗವಹಿಸಿದ್ದರು. ವಿದ್ಯಾರ್ಥಿ ನಾಯಕಿ ಕು. ಯವನಿಕಾ ಕಾರ್ಯಕ್ರಮ ನಿರೂಪಿಸಿ, ಕು. ಅನುಷಾ ಸ್ವಾಗತಿಸಿದರು. ಸ್ಪೂರ್ತಿ ಕುಮಾರ್ ಧನ್ಯವಾದ ಸಮರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top