ಮತದಾನ: ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ವಿಜೇತರು

Upayuktha
0


ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ - 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ.


ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಹೆಚ್ ಫಕ್ರುದ್ದೀನ್ ಪ್ರಥಮ, ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ದ್ವಿತೀಯ, ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ, ಸಮಾಧಾನಕರ ಬಹುಮಾನಕ್ಕೆ ಇಬ್ಬರು ಆಯ್ಕೆಯಾಗಿದ್ದು ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಪೂರ್ಣಿಮ ರವಿ ಮತ್ತು ವಿಶೇಷ ಬಹುಮಾನಕ್ಕೆ ಸಹ ಇಬ್ಬರು ಆಯ್ಕೆಯಾಗಿದ್ದು, ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ವಿಜೇತರಾಗಿದ್ದಾರೆ. ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುವುದು. 


ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್, ಐ.ಎಫ್.ಎಸ್, ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್ ಹಿರಿಯ ಸಮಾಲೋಚಕರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್. ವಸ್ತçದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು.


ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರು ಸೇರಿದಂತೆ ಒಟ್ಟು 219 ಜನರು ಭಾಗವಹಿಸಿದ್ದು, ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಕಳುಹಿಸಿದ್ದರು. ಪ್ರಶಸ್ತಿಗೆ ಆಯ್ಕೆಯಾದ ಎಲ್ಲರಿಗೂ ಮುಖ್ಯ ಚುನಾವಣಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top