|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಶ್ರಮ ಅಗತ್ಯ: ಶ್ರವಣ್ ಕುಮಾರ್ ನಾಳ

ಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಶ್ರಮ ಅಗತ್ಯ: ಶ್ರವಣ್ ಕುಮಾರ್ ನಾಳ

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ



ಪುತ್ತೂರು: ಮಾಧ್ಯಮ ಕ್ಷೇತ್ರವು ಬಹಳ ವಿಸ್ತಾರಗೊಳ್ಳುತ್ತಾ ಬಂದಿದೆ. ಡಿಜಿಟಲೀಕರಣದಿಂದಾಗಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಪರ್ವ ಆರಂಭವಾಯಿತು. ಕೆಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಅನೇಕ ಬದಲಾವಣೆಗಳು ಉಂಟಾಗಿದೆ.. ಪತ್ರಿಕೋದ್ಯಮದಲ್ಲಿ ತುಂಬಾ ಆಯಾಮಗಳಿವೆ. ಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಶ್ರಮದ ಅವಶ್ಯಕತೆಯಿದೆ ಹಾಗೂ ಪತ್ರಕರ್ತರಿಗೆ ಸಮಾಜವನ್ನು ಉನ್ನತಿಯತ್ತ ಕೊಂಡೊಯ್ಯುವ ಜವಾಬ್ದಾರಿಯಿದೆ. ಹಾಗಾಗಿ ಮುಂದೆ ಪತ್ರಿಕೋದ್ಯಮದಲ್ಲಿ ಕರ‍್ಯ ನಿರ್ವಹಿಸಲು ಇಚ್ಛಿಸುವವರು ಈಗಾಗಲೇ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕಾಗಿದೆ.  ಪತ್ರಕರ್ತರು ಪತ್ರಿಕಾ ಸ್ವಾತಂತ್ರ‍್ಯವನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು ಎಂದು ವಿಜಯವಾಣಿಯ ಮಂಗಳೂರಿನ ವರದಿಗಾರ ಶ್ರವಣ್ ಕುಮಾರ್ ನಾಳ ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪತ್ರಿಕೊದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಮಾತನಾಡಿ, ಮಾಧ್ಯಮ ಎನ್ನುವುದು ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾಗಿ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ಪತ್ರಿಕೋದ್ಯಮದಲ್ಲಿ ಕಾರ‍್ಯನಿರ್ವಹಿಸುತ್ತಿರುವ ನಮಗೆಲ್ಲರಿಗೂ ಹೆಚ್ಚಿನ ಜವಾಬ್ದಾರಿಗಳು ಇರುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಮುಂದುವರೆಯಬೇಕು ಎಂದು ಅಭಿಪ್ರಾಯಪಟ್ಟರು.


ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಿ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಅಡ್ಡಂತಡ್ಕ ಸ್ವಾಗತಿಸಿ, ಲತಾ ಚೆಂಡೆಡ್ಕ ವಂದಿಸಿ,  ಸಂಶೀನಾ ಸೂರ್ಯ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 Comments

Post a Comment

Post a Comment (0)

Previous Post Next Post