ಮಂಗಳೂರು ವಿವಿ ಕಾಲೇಜಿನಲ್ಲಿ ನಾಳೆ ಹಿಂದಿ ಯುವ ಬರಹಗಾರರ ಶಿಬಿರ

Upayuktha
0


ಮಂಗಳೂರು: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಕೇಂದ್ರೀಯ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಹಿಂದಿ ಸ್ನಾತಕೋತ್ತರ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಐದು ದಿನಗಳ ವಿಶೇಷ ಹಿಂದಿ ಯುವ ಬರಹಗಾರರ ಶಿಬಿರವನ್ನು ಏರ್ಪಡಿಸಲಾಗಿದೆ. ಮೇ 13 ರಿಂದ 17ರ ವರೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮ 13ರ ಸೋಮವಾರ ಬೆಳಗ್ಗೆ 10:30ಕ್ಕೆ ಡಾ. ಶಿವರಾಮ ಕಾರಂತ ಸಭಾ ಭವನದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ.ಎಲ್.‌ ಧರ್ಮ ಅವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಸುನಿಲ್‌ ಬಾಬುರಾವ್ ಕುಲಕರ್ಣಿ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು ವಹಿಸಲಿದ್ದಾರೆ.


ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 10 ಕಾಲೇಜಿನ 23 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 50 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ. ಐದು ದಿನಗಳ ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್‌, ಮೈಸೂರು, ಪ್ರೊ. ಪ್ರಭಾ ವಿ. ಭಟ್‌, ಧಾರವಾಡ, ಡಾ. ಸುಮಂಗಲಾ ಮಾಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ ಮಂಗಳೂರು, ಡಾ. ಮುಕುಂದ ಪ್ರಭು ಮಂಗಳೂರು ಡಾ. ಸುಮ ಟಿ. ರೋಡನ್ನವರ್‌ ಮಂಗಳೂರು ಇವರು ಭಾಗವಹಿಸಲಿದ್ದಾರೆ.


ಪ್ರತಿದಿನ ಶಿಬಿರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಶಿಬಿರಾರ್ಥಿಗಳ ನೋಂದಣಿ ಹಾಗೂ ಉಚಿತ ಊಟೋಪಚಾರಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top