ಮಂಗಳೂರು: ಮಂಗಳೂರಿನ ಅಡ್ಯಾರ್ ನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶನಿವಾರ (ಜೂ.22) ಅಭ್ಯುದಯ ಮಹಿಳಾ ಮಂಡಳಿ ಅಡ್ಯಾರ್ ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವರ ಜಂಟಿ ಆಶ್ರಯದಲ್ಲಿ, ದಿವಂಗತ ಶ್ರೀಮತಿ ಜಯಲಕ್ಷ್ಮಿ ಎಸ್ ಹೆಗ್ಡೆ ಇವರ ಸ್ಮರಣಾರ್ಥ 'ಉಚಿತ ಕಣ್ಣಿನ ತಪಾಸಣಾ ಶಿಬಿರ' ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಉಪಯೋಗ ಪಡೆದರು.
ಕಾರ್ಯಕ್ರಮದಲ್ಲಿ ಕೆ.ಎಂ.ಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಬರ್ಟ್ ಮಾರಿಯೋ ಪಿರೇರಾ, ಕೆ.ಎಂ.ಸಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಅಭ್ಯುದಯ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಸರಿತಾ ರಾಜಮೋಹನ್ ಬೈದ್ಯಾವುಗುತ್ತು ಹಾಗೂ ಸದಸ್ಯರು ಹಾಜರಿದ್ದರು.
ದೇವದಾಸ್ ಪಕ್ಕಳ ಅಡ್ಯಾರ್ ಗುತ್ತು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶ್ರೀಮತಿ ಶೀಲಾ ಬಿ ಶೆಟ್ಟಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


