ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯರ ಮುಖೇನ ಗಣಪತಿ ಹವನ
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಬಪ್ಪಳಿಗೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ತರಗತಿಗಳನ್ನು ಸೋಮವಾರ ಗಣಪತಿ ಹವನದ ಮೂಲಕ ಆರಂಭಿಸಲಾಯಿತು. ವೇ. ಮೂ. ಶ್ರೀಕೃಷ್ಣ ಉಪಾಧ್ಯಾಯ ಗಣಪತಿ ಹವನ ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು ಗಣಪತಿ ಹವನದಿಂದ ತರಗತಿಗಳ ಶುಭಾರಂಭವಾಗಿದೆ. ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಸಫಲತೆ ನಮ್ಮದಾಗಬಹುದು ಎಂದರಲ್ಲದೆ ಪೋಷಕರು ಮಕ್ಕಳಲ್ಲಿ ಶುದ್ಧ ಚಿಂತನೆ ತುಂಬಬೇಕೆಂದು ಕಿವಿಮಾತು ಹೇಳಿದರು. ಮುದ್ದು ಪುಟಾಣಿಗಳಿಗೆ ಆರತಿ ಬೆಳಗಿ, ಕುಂಕುಮ ಇಟ್ಟು, ಹೂ ಮುಡಿಸಿ ಶಿಕ್ಷಕಿಯರು ಸಾಂಪ್ರದಾಯಿಕವಾಗಿ ಶಾಲೆಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಪುತ್ರ ಶ್ರೀಕೃಷ್ಣ ನಟ್ಟೋಜ, ಶಾಲಾ ಪ್ರಾಂಶುಪಾಲೆ ಕು ಮಾಲತಿ ಡಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ಮಕ್ಕಳ ಪೋಷಕರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ