ಬೆಂಗಳೂರು : ಆರ್ಯಭಟ ಸಾಂಸ್ಕೃತಿಕ ಸಂಸ್ಥೆ (ರಿ.) ವತಿಯಿಂದ 49ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ 23ರಂದು ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿತ್ತು. ಈ ಸಂದರ್ಭದಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ನಾಟ್ಯೇಶ್ವರ ನೃತ್ಯ ಶಾಲೆಯ (ರಿ.) ಸಂಸ್ಥಾಪಕರು ಹಾಗು ಗುರುಗಳಾದ ವಿದ್ವಾನ್ ಶ್ರೀ ಕೆ. ಪಿ. ಸತೀಶ್ ಬಾಬು ಅವರಿಗೆ "ಆರ್ಯಭಟ ಪ್ರಶಸ್ತಿ-2024" ಪ್ರದಾನ ಮಾಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ನ್ಯಾಯಮೂರ್ತಿಗಳಾದ ಡಾ|| ಹೆಚ್. ಬಿ. ಪ್ರಭಾಕರ ಶಾಸ್ತ್ರಿ ಅವರು ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ 'ನಾಡೋಜ' ಡಾ|| ಮಹೇಶ್ ಜೋಶಿ ಹಾಗೂ ಕನ್ನಡ ಚಿತ್ರ ನಿರ್ದೇಶಕರೂ, ನಟರೂ ಆದ ಎಸ್. ನಾರಾಯಣ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ವಿಶೇಷ ಸಮಾರಂಭವು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ|| ಹೆಚ್.ಎಲ್.ಎನ್. ರಾವ್ ಅವರ ನೇತೃತ್ವದಲ್ಲಿ ಜರುಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


