ಬಿಜೆಪಿ ನಾಯಕ ಎಂ.ಬಿ. ಭಾನುಪ್ರಕಾಶ್ ಅವರ ನಿಧನ, ವಿಜಯೇಂದ್ರ ಸಂತಾಪ

Upayuktha
0

                                                                       .


                                                                  

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ (68 ವರ್ಷ) ಅವರ ನಿಧನ ಅತ್ಯಂತ ದುಃಖಕರ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ನಮ್ಮೆಲ್ಲ ಹಿರಿಯರು, ಮಾರ್ಗದರ್ಶಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು, ವಿಧಾನಪರಿಷತ್ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾತ್ರವಲ್ಲದೆ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಹಾಗೂ ಕರಾವಳಿ ಕರ್ನಾಟಕದ ಲೋಕಸಭಾ ಕ್ಲಸ್ಟರ್ ಪ್ರಮುಖರಾಗಿ ಅವರು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ. 

ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top