ನರಿಕೊಂಬು: ಎಲ್‌ಕೆಜಿ-ಯುಕೆಜಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Upayuktha
0


ಬಂಟ್ವಾಳ: ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎಲ್‌ಕೆಜಿ- ಯುಕೆಜಿ (ಪೂರ್ವ ಪ್ರಾರ್ಥಮಿಕ ತರಗತಿ) ವಿದ್ಯಾರ್ಥಿಗಳ ಸ್ವಾಗತ  ಕಾರ್ಯಕ್ರಮ ಜರಗಿತ್ತು. ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನ ದೊಂದಿಗೆ ಸ್ವಾಗತಿಸಿ ಉಡುಗೊರೆ ನೀಡಿ ಶಾಲೆಗೆ ಬರ ಮಾಡಿಕೊಳ್ಳಲಾಯಿತು. ವಿಶೇಷ ಆಕರ್ಷಣೆಯಾಗಿ ಸೆಲ್ಫಿ ಕಾರ್ನರ್ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಪೋಷಕರೊಂದಿಗೆ ಸೆಲ್ಫಿ ಫೋಟೋ ತೆಗೆಯುವ ಮೂಲಕ ತಮ್ಮ ಶಾಲಾ ಪ್ರವೇಶದ ಮೊದಲ ದಿನದಲ್ಲಿ ಆನಂದಿಸಿದರು.


ನಂತರ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು. ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಶಾಲಾಕ್ಷಿ, ಬ್ಯಾಂಕ್ ಅಧಿಕಾರಿ ಚಂದ್ರಶೇಖರ್ ರಾವ್, ಶಾಲಾ ಅಭಿವೃದ್ಧಿ ಸಮಿತಿ ಸರ್ವ ಸದಸ್ಯರು, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಶಿಕ್ಷಕಿ ದಿವ್ಯಾಶ್ರೀ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ಎಂ ಪ್ರಸ್ತಾವನೆ ನುಡಿಗಳನ್ನಾಡಿದರು. ಸುನೀತ ವಂದಿಸಿ, ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top