ಸಂಡೂರು: ಜೂ 25ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Upayuktha
0


ಸಂಡೂರು: ತೋರಣಗಲ್ಲು ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಜೆಸ್ಕಾಂ ವತಿಯಿಂದ ವಿದ್ಯುತ್ ಮಾರ್ಗಗಳ ಬದಲಾವಣೆ ಮತ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ 110/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಗ್ರಾಮಗಳಲ್ಲಿ ಜೂನ್ 25 ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ ಎಂದು ಜೆಸ್ಕಾಂ ಸಂಡೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ. ಉಮೇಶ್ ಕುಮಾರ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ವಿತರಣಾ ಕೇಂದ್ರ ವ್ಯಾಪ್ತಿಯ ವಡ್ಡು, ತಾಳೂರು, ಬನ್ನಿಹಟ್ಟಿ, ತಾರನಗರ, ಕುರೆಕುಪ್ಪಾ ಟೌನ್, ತೋರಣಗಲ್ಲು ಗ್ರಾಮ ಮತ್ತು ತೋರಣಗಲ್ಲು ರೈನಿ ಹಾಗೂ ವಿಠಲಾಪುರ ಶಾಖೆಗೆ ಒಳಪಡುವ ಎಲ್ಲಾ ಗ್ರಾಮ ಪಂಚಾಯಿತಿಗಳಾದ ವಿಠಲಾಪುರ, ಅಂತಾಪುರ, ಮೆಟ್ರಿಕಿ, ರಾಜಪುರ ಗ್ರಾಮಗಳು ಮತ್ತು ಸುಲ್ತಾನ್‌ಪುರ್ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top