ನಗರ ಅಭಿವೃದ್ಧಿಗಾಗಿ ನನ್ನ ಶಕ್ತಿಯನ್ನು ಮೀರಿ ಶ್ರಮಿಸುವೆ: ಮುಲ್ಲಂಗಿ ನಂದೀಶ್
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ಗಾಗಿ ಜೂನ್ 21ರಂದು ಚುನಾವಣೆ ನಡೆದು ನಗರದ 18ನೇ ವಾರ್ಡಿನ ಪಾಲಿಕೆ ಸದಸ್ಯ ಮುಲ್ಲಂಗಿ ನಂದೀಶ್ ಪಾಲಿಕೆಯ 23ನೇ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಕೌಲ್ ಬಜಾರ್ ಪ್ರದೇಶದ 28ನೇ ವಾರ್ಡಿನ ಸದಸ್ಯೆ ಡಿ ಸುಖಂ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಮತ್ತು ಉಪ ಮೇಯರ್ ಜೂ 24 ಸೋಮವಾರರಂದು ಪಾಲಿಕೆಯ ತಮ್ಮ ತಮ್ಮ ಕಛೇರಿಯಲ್ಲಿ ವಿಶೇಷವಾದ ಪೂಜೆಯನ್ನು ಸಲ್ಲಿಸುವ ಮೂಲಕ ಅಧಿಕಾರವನ್ನು ಸ್ವೀಕರಿಸಿದರು.
ಮೇಯರ್‌ಗಿರಿಗಾಗಿ ತೀವ್ರ ಪೈಪೋಟಿ ನಡೆದು ಪಕ್ಷದ ಮುಖಂಡರ ಮಧ್ಯಸ್ಥಿಕೆಯಿಂದ ಕೊನೆಗೆ ಮೇಯರ್ ಪಟ್ಟ ಮುಲ್ಲಂಗಿ ನಂದೀಶ್ ಅವರಿಗೆ ದಕ್ಕಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ನಂದೀಶ್ ನನ್ನ ಅಧಿಕಾರವಧಿಯ ಮೊದಲ ಆದ್ಯತೆ ಎಂದರೆ ಸಮರ್ಪಕವಾದ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿಗಳ ವ್ಯವಸ್ಥೆ,ಬೀದಿ ದೀಪಗಳು ಕಲ್ಪಿಸುವುದು ಹಾಗೂ ನಗರದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸ್ವಚ್ಚತೆಯನ್ನು ಕಾಪಾಡಿ ಮರಗಿಡಗಳನ್ನು ನೆಡುವುದರ ಮೂಲಕ ನಗರವನ್ನು ಹಸೀರೀಕರಣ ಮಾಡಿ ಸೌಂದರ್ಯೀಕರಣ ಕಾಪಾಡುವುದು ಮತ್ತು ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹಿರಿಯ ಮಾರ್ಗದರ್ಶನದಲ್ಲಿ ನಾನು ನನ್ನ ಶಕ್ತಿಯನ್ನು ಮೀರಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಮುಖಂಡರು ಮತ್ತು ನಂದೀಶ್‌ರವರ ಕುಟುಂಬ ಸದಸ್ಯರು ಸೇರಿದಂತೆ ಸ್ನೇಹಿತರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನೂತನ ಮೇಯರ್ ಮುಲ್ಲಂಗಿ ನಂದೀಶ್‌ರವರಿಗೆ ಹೂಗುಚ್ಚ ನೀಡುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


