ಬೆಂಗಳೂರು: ಬಿಎಂಎಸ್ ಮಹಿಳಾ ಕಾಲೇಜು ಸ್ವಾಯತ್ತ ಸಂಸ್ಥೆಯು 2024ರ ಕಾಲೇಜು ದಿನಾಚರಣೆಯನ್ನು ಇಂದು (ಜೂನ್ 21) ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿತ್ತು.
ಸ್ವರಾತ್ಮ ತಂಡದ ನೇತೃತ್ವದಲ್ಲಿ ಪ್ರಾರ್ಥನಾ ಗೀತೆಯನ್ನು ಹಾಡಿ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಬಿಎಂಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ.ಇ. ವಸುಂಧರಾ, ಗಣ್ಯರನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು.
ಡಾ. ಬಿ.ಎಸ್. ರಾಗಿಣಿ ನಾರಾಯಣ್, ಧರ್ಮದರ್ಶಿಗಳು ಮತ್ತು ಅಧ್ಯಕ್ಷರು, ಬಿಎಂಎಸ್ ಎಜುಕೇಶನಲ್ ಟ್ರಸ್ಟ್, ಅಧ್ಯಕ್ಷರು, ಬಿಎಂಎಸ್ ಮಹಿಳಾ ಕಾಲೇಜು, ಅವಿರಾಮ್ ಶರ್ಮಾ, ಧರ್ಮದರ್ಶಿಗಳು, ಬಿಎಂಎಸ್ ಎಜುಕೇಷನಲ್ ಟ್ರಸ್ಟ್, ವಿಂಗ್ ಕಮಾಂಡರ್, ಆರ್.ಎ. ರಾಘವನ್ ರವರು ಹಾಗೂ ಮುಖ್ಯ ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಿರ್ಮಾಪಕ- ನಿರ್ದೇಶಕ ಹಾಗೂ ಲಂಕೇಶ ಪತ್ರಿಕೆಯ ಪ್ರಕಾಶಕ ಇಂದ್ರಜಿತ್ ಲಂಕೇಶ್, ಜನಪ್ರಿಯ ಗಾಯಕಿ ಶ್ರೀಮತಿ ಸಾಧ್ವಿನಿ ಕೊಪ್ಪ, ಮತ್ತು ಚಲನಚಿತ್ರ ಸಂಗೀತ ನಿರ್ದೇಶಕ ಮತ್ತು "ಗೌರಿ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ನಟ ಸಮರ್ಜಿತ್ ಲಂಕೇಶ್ ರವರು ಈ ಸಮಾರಂಭದಲ್ಲಿ ಭಾಗವಹಿಸಿದರು.
ಉಪಪ್ರಾಂಶುಪಾಲರಾದ ಪ್ರೊ. ಎ. ಗಾಯತ್ರಿ, ಬಿಎಂಎಸ್ ಪಿಯು ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
100 ಶೇಕಡಾ ಅಂಕ ಗಳಿಸಿದ ಮತ್ತು ವಿವಿಧ ವಿಭಾಗಗಳು- ವಿಷಯಗಳಲ್ಲಿ ರ್‍ಯಾಂಕ್ ಪಡೆದ ಸುಮಾರು 40 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ನಗದು ಬಹುಮಾನಗಳನ್ನು ನೀಡಲಾಯಿತು.
ಇಂದ್ರಜಿತ್ ಲಂಕೇಶ್ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು.
ಶ್ರೀಮತಿ ಸಾಧ್ವಿನಿ ಕೊಪ್ಪ ಅವರು, ಭಾರತೀಯ ಶಾಸ್ತ್ರೀಯ ಸಂಗೀತದ ಮಹತ್ವವನ್ನು ಸಾರುವ ವಿಶ್ವ ಸಂಗೀತ ದಿನದ ಕುರಿತು ಹಾಗೂ ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ಮಾತನಾಡಿದರು. ತಮ್ಮ ಗಾಯನದ ಮೂಲಕ ವಿದ್ಯಾರ್ಥಿಗಳಿಗೆ ಮನರಂಜನೆ ನೀಡಿದರು.
ಸಮರ್ಜಿತ್ ಲಂಕೇಶ್ ಅವರು ತಮ್ಮ ಚೊಚ್ಚಲ ಸಿನಿಮಾ ಸಂಬಂಧಿಸಿದಂತೆ ಕೆಲವು ಮಾತುಗಳನ್ನು ಆಡಿ, ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿ ರಂಜಿಸಿದರು.
ಉಪ ಪ್ರಾಂಶುಪಾಲರಾದ ಪ್ರೊ. ಎ. ಗಾಯತ್ರಿ ಅವರು ವಂದನಾರ್ಪಣೆ ಮಾಡಿದರು. ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಡಿಜೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

