ಬೋಳಿಯಾರ್ ಗಾಯಾಳುಗಳ ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

Upayuktha
0


ಮಂಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿಯವರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಭೇಟಿ‌ ನೀಡಿ ಬೋಳಿಯಾರ್ ಘಟನೆಯ ಸಂತ್ರಸ್ತರ ಆರೋಗ್ಯ ವಿಚಾರಿಸಿದರು.


ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂಭ್ರಮಾಚರಣೆಯಲ್ಲಿದ್ದ ಸಂಧರ್ಭದಲ್ಲಿ ಹಲ್ಲೆ ಗೀಡಾದ ಬಿ.ಜೆ.ಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಮತ್ತು ನಂದನ್ ಕುಮಾರ್ ರವರನ್ನು ಭೇಟಿ ಮಾಡಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಧಾನ ಸೌಧದ ಒಳಗಡೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದುಷ್ಕರ್ಮಿಗಳನ್ನು ಬೆಂಬಲಿಸುವ ಕಾಂಗ್ರೆಸಿಗರು ಮಂಗಳೂರಿನ ಬೋಳಿಯಾರ್ ನಲ್ಲಿ ಭಾರತಾ ಮಾತ ಜೈ ಘೋಷಣೆ ಕೂಗಿದ ದೇಶಭಕ್ತರ ಮೇಲೆ ಕೇಸು ಹಾಕಿಸುತ್ತಾರೆ. ಕನಿಷ್ಠ ಪಕ್ಷ ಮಾನವೀಯತೆಯ ದೃಷ್ಟಿಯಿಂದಲಾದರೂ ಸಂತ್ರಸ್ತರನ್ನು ಭೇಟಿ ಮಾಡದ ಸ್ಥಳೀಯ ಶಾಸಕರ ನಡವಳಿಕೆ ಒಂದು ಸಮುದಾಯವನ್ನು ತೃಪ್ತಿ ಪಡಿಸುವುದಾಗಿದೆ. ಬಿ.ಜೆ.ಪಿ ಕಾರ್ಯಕರ್ತರ ಪರ ಬಲವಾಗಿ ನಿಲ್ಲಲಿದೆ ಎಂದರು.


ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಮಂಡಲದ ಉಪಾಧ್ಯಕ್ಷರಾದ ಯಶವಂತ ದೇರಾಜೆ, ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಕಾರ್ಯದರ್ಶಿಗಳಾದ ಜೀವನ್ ಕುಮಾರ್ ತೊಕ್ಕೊಟ್ಟು, ಭರತ್ ಗಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ನಿಶಾನ್ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ಸಂಪತ್ ಕುಕ್ಯಾನ್, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಮುರಳಿ ಕೋಣಾಜೆ ಇತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top