ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಭಾರತೀಯ ಜನೌಷಧಿ ಕೇಂದ್ರ ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಬೃಹತ್ ಸಸಿ ವಿತರಣಾ ಕಾರ್ಯಕ್ರಮ ಇಂದು (ಜೂನ್ 5) ಜನ ಔಷಧಿ ಕೇಂದ್ರದ ಪರಿಸರದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಪರಿಸರ ಉಳಿದರೆ ಮಾತ್ರ ಮಾನವ ಸಂಕುಲ ಉಳಿಯಬಹುದು ಇಂದಿನ ಈ ಬಿಸಿಯಾದ ವಾತಾವರಣದಲ್ಲಿ ಬದುಕುವುದು ಕಷ್ಟ ಎನ್ನುವ ಪರಿಸ್ಥಿತಿಯಿದೆ. ಪರಿಸರವು ವಿವಿಧ ಕಾರಣಗಳಿಂದ ನಾಶವಾಗುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಗಿಡ ನೆಡುವ ಸಂಕಲ್ಪ ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಎಫ್ಓ ಹರೀಶ್ ಸಿ ವಾರಂಬಳ್ಳಿ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ್ ಐತಾಳ್ ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು.
ಕಾರ್ಯದರ್ಶಿ ಮಿಲ್ಟನ್ ಒಲಿವರ್, ಅರಣ್ಯ ಅಧಿಕಾರಿಗಳಾದ ರಮೇಶ್, ಅಕ್ಷಿತಾ ಶೆಟ್ಟಿ ಮುಂತಾದವರಿದ್ದರು. ಜಯಂಟ್ಸ್ ಸದಸ್ಯರು ಸಹಕರಿಸಿದರು. ಸುಮಾರು 5 ಸಾವಿರ ವಿವಿಧ ಬಗೆಯ ಸಸಿಗಳನ್ನು ಸಾವ೯ಜನಿಕರಿಗೆ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ