ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ: ಜನಶಿಕ್ಷಣ ಟ್ರಸ್ಟ್‌ ನಿರ್ದೇಶಕ ಶೀನ ಶೆಟ್ಟಿ

Upayuktha
0

ಅ.ಭಾ.ಸಾ.ಪ. ಮಂಗಳೂರು ತಾಲೂಕು ಘಟಕದಿಂದ ಹಸಿರಾಗಿಸೋಣ ಪರಿಸರ- ಸಂವಾದ




ಮಂಗಳೂರು: ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯನ್ನು ಗುಣ ಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಹೇಳಿದರು.


ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಘಟಕದ ವತಿಯಿಂದ ಜನಶಿಕ್ಷಣ ಟ್ರಸ್ಟ್ ಮುಡಿಪು, ಜನಜೀವನ ಬಾಳೆಪುಣಿ ಮತ್ತು ಚಿತ್ತಾರ ಬಳಗದ ಸಹಯೋಗದಲ್ಲಿ ಜನಶಿಕ್ಷಣ ಟ್ರಸ್ಟ್‌ನ ಸಭಾಂಗಣದಲ್ಲಿ ನಡೆದ ಹಸಿರಾಗಿಸೋಣ ಪರಿಸರ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ‘ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ಮೂಲಕ ಸ್ವಚ್ಛ ಗ್ರಾಮದ  ಪರಿಕಲ್ಪನೆ ಎಲ್ಲೆಡೆ ಸಾಕಾರಗೊಳ್ಳಬೇಕು ಎಂದರು.

ಅಭಾಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ ಮಾತನಾಡಿ, ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.


ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಬಾಳೆಪುಣಿ ಅಧ್ಯಕ್ಷ ರಮೇಶ್ ಶೇಣವ ಅಧ್ಯಕ್ಷತೆ ವಹಿಸಿದ್ದರು. ಜನ ಶಿಕ್ಷಣ ಟ್ರಸ್ಟ್‌ನ ತರಬೇತಿ ಕೇಂದ್ರದ ಶಿಕ್ಷಕಿ ಕಾವೇರಿ ಇವರನ್ನು ಸನ್ಮಾನಿಸಲಾಯಿತು. ನರಿಂಗಾನ ಗ್ರಾಪಂ ಅಧ್ಯಕ್ಷ ಮಹಮ್ಮದ್ ನವಾಝ್, ಇರಾ ಗ್ರಾಪಂ ಅಧ್ಯಕ್ಷ ಎಂ.ಬಿ. ಉಮ್ಮರ್, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಉಪಸ್ಥಿತರಿದ್ದರು. ಅಭಾಸಾಪ ಮಂಗಳೂರು ತಾಲೂಕು ಘಟಕದ ಉಪಾಧ್ಯಕ್ಷರಾದ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಚಂದ್ರಹಾಸ ಕಣಂತೂರು ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top