ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಜೀವ ಸದಸ್ಯತ್ವ ಅಭಿಯಾನ ಜೂನ್ 19ರಂದು ಬುಧವಾರ ಮಂಗಳೂರು ನಗರದಾದ್ಯಂತ ನಡೆಯಲಿದೆ. ಈ ಅಭಿಯಾನದಲ್ಲಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಧ್ಯಾಪಕರು, ಸರಕಾರಿ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು, ಸಾಹಿತಿಗಳು, ಕನ್ನಡಾಭಿಮಾನಿಗಳು, ಎಲ್ಲರೂ ನಮ್ಮೊಂದಿಗೆ ಸಹಕರಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಚಾಲನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ, ಮಂಗಳೂರು ಇಲ್ಲಿಯ ಪ್ರಾಂಶುಪಾಲರಾದ ಡಾ. ತಾರಾನಾಥ್ ಅವರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸಿಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ವರೆಗೆ ಕಾನೂನು ಮಹಾ ವಿದ್ಯಾಲಯದಲ್ಲಿ ಸದಸ್ಯತ್ವಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಬೇಕಾಗುವ ಮಾಹಿತಿಗಳು
1. ಪಾಸ್ ಪೋರ್ಟ್ ಸೈಜ್ ಭಾವಚಿತ್ರ
2. ಆಧಾರ್ ಕಾರ್ಡ್ ಸಂಖ್ಯೆ
3. ರೂಪಾಯಿ 410 ನೀಡಿ ನೋಂದಾಯಿಸಿಕೊಳ್ಳಲು ಅವಕಾಶ ಇದೆ.
ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವುದರ ಮೂಲಕ ಸಾಹಿತ್ಯ ಪರಿಷತ್ತು ನಮ್ಮ ಸಾಹಿತ್ಯ ಪರಿಷತ್ತು ಎನ್ನುವ ಭಾವನೆಯೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕಸಾಪ ಪ್ರಕಟಣೆ ಕೋರಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


