ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯನ್ನು ಉಜಿರೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮಾಡಿಕೊಂಡು ಬರುತ್ತಿದೆ. ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ವಿದ್ಯಾರ್ಥಿಗಳು ಕೂಡ ಇವತ್ತು ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದನ್ನು ನೋಡಿ ಬಹಳ ಸಂತೋಷವಾಗಿದೆ ಎಂದು ಶುಭ ಹಾರೈಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿನೂತನ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಾಹಿತ್ಯವನ್ನು ಜಿಲ್ಲೆಯಾದ್ಯಂತ ವಿಸ್ತರಿಸಿದೆ. ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತವಾಗಿ ನಡೆಯಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಮಾತನಾಡಿ, ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಮತ್ತು ಡಿ. ಹರ್ಷೇಂದ್ರ ಕುಮಾರ ಅವರ ಮಾರ್ಗದರ್ಶನದಲ್ಲಿ ಸಾಹಿತ್ಯ ಪರಿಷತ್ತಿಗೆ ವಿಶೇಷ ಸೌಲಭ್ಯವನ್ನು ಒದಗಿಸಿ ಕೊಟ್ಟಿದ್ದಾರೆ. ಆ ಮೂಲಕ ಇನ್ನಷ್ಟು ಬಲ ಬಂದಿದೆ ಎಂದು ಎಲ್ಲರಿಗೂ ಕೃತ್ಞತೆಗಳನ್ನು ಸಲ್ಲಿಸಿದರು.
ಡಾ. ದಿವ ಕೊಕ್ಕಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡ, ಪ್ರೊ.ಎಸ್ ಎನ್. ಕಾಕತ್ಕರ್, ಡಾ. ಶಲಿಪ್ ಎ.ಪಿ, ಸಂತೋಷ್ ಸಲ್ದಾನ, ಡಾ.ಮಹೇಶ್ ಕುಮಾರ್ ಶೆಟ್ಟಿ, ದಿವಾಕರ್ ಪಟುವರ್ಧನ್, ಹರ್ಷಕುಮಾರ್, ಗಣೇಶ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


