ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.
ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು.
ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2 ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಯೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಪೂಜ್ಯ ಶ್ರೀ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು “ಮಂಜೂಷಾ”ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.
ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ