ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಇಂದು ಶುಕ್ರವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಹತ್ತನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜಾನ್ ಎಬ್‌ನಜೀರ್ ಮತ್ತು ತುಮಕೂರು ಶ್ರೀ ಸಿದ್ಧಾರ್ಥ ಅಕಾಡೆಮಿಯ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಮುಖ್ಯಅತಿಥಿಗಳಾಗಿ ಶುಭಾಶಂಸನೆ ಮಾಡುವರು.
ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹನಾಯಕ್ ಸಮಾರಂಭದಲ್ಲಿ ಭಾಗವಹಿಸುವರು.
ಪೂರ್ವಾಹ್ನ 7 ಗಂಟೆ ಯಿಂದ 8 ಗಂಟೆ ವರೆಗೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
