ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಮರಣೆ

Upayuktha
0


ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣದ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಜನಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನವನ್ನು ಆಚರಿಸಲಾಯಿತು. 


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ರಾಷ್ಟ್ರೀಯ ವಿಚಾರಧಾರೆ ಹೊಂದಿರುವ ಭಾರತೀಯ ಜನಸಂಘವನ್ನು ಸ್ಥಾಪಿಸಿ ರಾಷ್ಟ್ರಾದ್ಯಂತ ಸಂಚರಿಸಿ ನಮ್ಮೆಲ್ಲರನ್ನೂ ಒಂದು ತತ್ವಸಿದ್ಧಾಂತದಡಿ ತಂದವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರು. ಬಿಜೆಪಿ ಇಂದು ದೇಶದಾದ್ಯಂತ ತನ್ನ ಬೇರುಗಳನ್ನು ಭದ್ರವಾಗಿ ಊರಲು ಸಾಧ್ಯವಾಗಿದ್ದರೆ ಅದಕ್ಕೆ ಮುಖರ್ಜಿಯವರಂಥ ಅನೇಕ ಮಹನೀಯರ ತ್ಯಾಗ, ಬಲಿದಾನ ಮತ್ತು ಬದ್ಧತೆಯೇ ಕಾರಣವಾಗಿದೆ ಎಂದರು. 


ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅಖಂಡ ಭಾರತದ ಘೋಷಣೆಯನ್ನು ಮತ್ತೊಮ್ಮೆ ಮೊಳಗಿಸಿದ್ದು ಮುಖರ್ಜಿಯವರ ಬಲಿದಾನಕ್ಕೆ ಸಲ್ಲಿಸುವ ಶ್ರೇಷ್ಠ ಗೌರವವಾಗಿದೆ ಎಂದು ಶಾಸಕರು ಹೇಳಿದರು.


ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಾಜಿ ಮೂಡ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಶಕ್ತಿಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top