ಭಾರತೀಯ ಪಶುವೈದ್ಯಕೀಯ ಪರಿಷತ್ ಸದಸ್ಯರಾಗಿ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

Upayuktha
0


ಮಂಗಳೂರು: ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶುವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

 

ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors
Mandovi Motors
To Top