ಬಿಜೆಪಿ ಮಂಗಳೂರು ಉತ್ತರ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸಂಸ್ಮರಣೆ

Upayuktha
0

ಸುರತ್ಕಲ್: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ಉತ್ತರ ಮಂಡಲದ ಕಾರ್ಯಾಲಯ ದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಆಚರಿಸಲಾಯಿತು.  


ಈ ಸಂದರ್ಭದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿಯವರ ಜೀವನ ಚರಿತ್ರೆಯನ್ನು ಹಿರಿಯರಾದ ರಾಮ ಮುಗ್ರೋಡಿಯವರು ಸವಿಸ್ತಾರವಾಗಿ ತಿಳಿಸಿದರು.


ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಗ್ಗೆ ಇನ್ನಷ್ಟು ಮಾಹಿತಿಯನ್ನು  ಜಿಲ್ಲೆಯ ಉಪಾಧ್ಯಕ್ಷರಾದ ಶ್ರೀಮತಿ ಪೂಜಾ ಪ್ರಶಾಂತ್ ಪೈ ಅವರು ತಿಳಿಸಿದರು. 


ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿಯವರು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಗ್ಗೆ ಹಾಗೂ ಪಕ್ಷ ಸಂಘಟನೆ ಹಾಗೂ 23 ರಿಂದ 6ರವರೆಗೆ ನಡೆಯಲಿರುವ ಮಂಡಲದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.


ಮಂಡಲದ ಪದಾಧಿಕಾರಿಗಳು, ಮಂಡಲದ ಜಿಲ್ಲೆಯ ಪದಾಧಿಕಾರಿಗಳು, ವಿವಿಧ  ಮೋರ್ಚಾದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.


ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿಯವರು ಸ್ವಾಗತಿಸಿದರು, ರಣದೀಪ್ ಕಾಂಚನ್ ರವರು ಧನ್ಯವಾದಗೈದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top