ಸುರತ್ಕಲ್ ವಿದ್ಯಾದಾಯಿನಿ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Upayuktha
0


ಸುರತ್ಕಲ್: ಯುವವಾಹಿನಿ (ರಿ )ಸುರತ್ಕಲ್ ಘಟಕ ಮತ್ತು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ವಿದ್ಯಾದಾಯಿನೀ ಫ್ರೌಡ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಇಂದು (ಜೂ.10) ಬೆಳಿಗ್ಗೆ 9.15 ಗಂಟೆಗೆ ಮುಖ್ಯ ಅತಿಥಿಗಳಾದ ಸುರತ್ಕಲ್ ಪೊಲೀಸ್ ಠಾಣಾ ಉಪನಿರೀಕ್ಷಕ ರಘು ನಾಯಕ್ ಇವರು ಶಾಲಾ ಮಕ್ಕಳಿಗೆ ಮಾದಕದ್ರವ್ಯ ಮತ್ತು ಅಂತರ್ಜಾಲ ಅಪರಾಧಗಳ ಬಗ್ಗೆ ಜಾಗೃತಿ ಅಭಿಯಾನವನ್ನು ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ನೆರವೇರಿಸಿ ಕೊಟ್ಟರು.

 

ಇಂಥಹ ಜಾಲಗಳಿಂದ ತಮ್ಮನ್ನು ತಾವು ಹೇಗೆ ರಕ್ಷಿಸಿ ಕೊಳ್ಳಬಹುದೆಂದು ಮನ ಮುಟ್ಟುವಂತೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ವಹಿಸಿದ್ದರು.  


ಈ ಕಾರ್ಯಕ್ರಮದ ಸಂಚಾಲಕರು ಹಾಗೂ ಮಾಜಿ ಅಧ್ಯಕ್ಷ ಗಂಗಾಧರ್ ಪೂಜಾರಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಅಧ್ಯಕ್ಷರು ಬಂದ ಅತಿಥಿಗಳಿಗೆ ಪುಸ್ತಕ, ಹೂ, ಒಣ ಹಣ್ಣು, ಸ್ಮರಣಿಕೆ ಕೊಟ್ಟು ಗೌರವಿಸಿದರು. ವಿದ್ಯಾದಾಯಿನೀ ಪ್ರೌಢ ಶಾಲಾ ಸಂಚಾಲಕ ಸುಧಾಕರ್ ರಾವ್ ಪೇಜಾವರರು ಮಕ್ಕಳಿಗೆ ವಿದ್ಯಾರ್ಥಿ ದೆಸೆಯಲ್ಲಿ ಬೇಕಾಗಿರುವ ಹಿತವಚನಗಳನ್ನಾಡಿದರು. ಘಟಕದ ಸದಸ್ಯೆ ಗಾಯತ್ರಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು.


ವೇದಿಕೆಯಲ್ಲಿ ಶಾಲಾ ಮುಖ್ಯೋಪಾದ್ಯಾಯ ಕೆ. ಬಾಲಚಂದ್ರ, ಘಟಕದ ಉಪಾಧ್ಯಕ್ಷೆ ವಾಣಿ ಗಣೇಶ್ ಮತ್ತು ಪ್ರಧಾನ ಕಾರ್ಯದರ್ಶಿ  ಸುಲತ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಮಾಜಿ ಅಧ್ಯಕ್ಷ ವಿಜಯ್ ಎಸ್ ಕುಕ್ಯಾನ್ ರವರು ಭಕ್ತಿಗೀತೆ ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನರಂಜಿಸಿದರು.


ವಿದ್ಯಾದಾಯಿನೀ ಪ್ರೌಢ ಶಾಲೆಯ ಸಂಸ್ಕೃತ ಉಪಾಧ್ಯಾಯರಾದ ದಿವಸ್ಪತಿ ಇವರ ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top