ಮೆಸ್ಕಾಂನಿಂದ ವಿದ್ಯುತ್‌ ಸುರಕ್ಷತಾ ಜಾಗೃತಿ ಸಪ್ತಾಹ

Upayuktha
0


ಮಂಗಳೂರು: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ಹಾಗೂ ವಿದ್ಯುತ್‌ ಪರಿವೀಕ್ಷಣಾ ಇಲಾಖೆ ಸಹಯೋಗದೊಂದಿಗೆ ಬುಧವಾರ ಸುರಕ್ಷತಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.


ನಗರದ ಬಿಜೈಯಲ್ಲಿರುವ ಮೆಸ್ಕಾಂ ಕಾರ್ಪೊರೇಟ್‌ ಕಚೇರಿ ಆವರಣದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮೆಸ್ಕಾಂ ನೌಕರರು ಕಂಪನಿಯ ಹಿತ ಹಾಗೂ ಗ್ರಾಹಕರ ತೃಪ್ತಿಯನ್ನು ಗಮನದಲ್ಲಿಕೊಂಡು ಕೆಲಸ ಮಾಡುವುದರ ಜೊತೆಗೆ ಸುರಕ್ಷತೆಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ. ಕಂಪನಿಯ ವತಿಯಿಂದ ತಮಗೆ ನೀಡಿರುವ ಸುರಕ್ಷತಾ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕರ್ತವ್ಯದ ಅವಧಿಯಲ್ಲಿ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಬಾರದು ಹಾಗೂ ಗ್ರಾಹಕರೊಡನೆ ಸದಾ ಸೌಜನ್ಯದಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.


ಮೆಸ್ಕಾಂ ತಾಂತ್ರಿಕ ನಿರ್ದೇಶಕರಾದ  ಹೆಚ್‌.ಜಿ. ರಮೇಶ್‌, ಉಪಮುಖ್ಯ ವಿದ್ಯುತ್‌ ಪರಿವೀಕ್ಷಕರಾದ ಕೆ.ಎಂ.ಕಾಂತರಾಜು, ಮುಖ್ಯ ಇಂಜಿನಿಯರ್‌ ಪುಷ್ಪಾ, ಮುಖ್ಯ ಆರ್ಥಿಕ ಅಧಿಕಾರಿ  ಮೌರಿಸ್‌ ಡಿʼಸೋಜ, ಆರ್ಥಿಕ ಸಲಹೆಗಾರರಾದ ಬಿ. ಹರಿಶ್ಚಂದ್ರ, ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್‌, ಕಾರ್ಯನಿರ್ವಾಹಕ ಇಂಜಿನಿಯರ್ ಲೋಹಿತ್, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ, ಮಾನ್ಯತೆ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.


ಇದೇ ವೇಳೆ ಮಂಗಳೂರು ವಿಭಾಗ ವ್ಯಾಪ್ತಿಯ ಪವರ್‌ಮೆನ್‌ಗಳು ಸಕ್ರಿಯವಾಗಿ ಭಾಗವಹಿಸಿದ ಜಾಥಾವು ಬಿಜೈಯಿಂದ ಬಳ್ಳಾಲ್‌ಬಾಗ್‌, ಲೇಡಿಹಿಲ್‌ ಮೂಲಕ ಸಾಗಿತು. ಸುರಕ್ಷತೆಯ ಬಗ್ಗೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ವಿದ್ಯುತ್‌ ಸುರಕ್ಷತಾ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮೆಸ್ಕಾಂ ವ್ಯಾಪ್ತಿಯಲ್ಲಿ ಮುಂದಿನ ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
To Top