ವಿವಿ ಕಾಲೇಜು: ನಿವೃತ್ತ ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸನ್ಮಾನ

Upayuktha
0


ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆಯಾಗಿದ್ದ ಪ್ರೊ. ಲತಾ ಎ. ಪಂಡಿತ್ ಅವರನ್ನು ಸನ್ಮಾನಿಸಲಾಯಿತು. 


ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕರ್ನಲ್ ಎನ್. ಶರತ್ ಭಂಡಾರಿ, ಡಾ. ಅನಸೂಯ ರೈ ಮತ್ತು ಪ್ರೊ. ಲತಾ ಎ. ಪಂಡಿತ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಸಂಘದ ಪದಾಧಿಕಾರಿಗಳಾದ ರಾಮದಾಸ ಗೌಡ, ಯು.ಮೋಹನ್ ರಾವ್, ಸುಭಾಶ್ಚಂದ್ರ ಕಣ್ವತೀರ್ಥ, ವಿಶ್ವನಾಥ ಕೊಡಿಯಾಲ್ಬೈಲ್, ನಮಿತ ಡಿ.ರಾವ್, ಮತ್ತು ಮಾಲಿನಿ ಅಂಚನ್ ಶುಭ ಹಾರೈಸಿದರು. ಸಂಘದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು. 


ಪ್ರಾಂಶುಪಾಲರ ಬಗ್ಗೆ ಮುರಳೀಧರ ಕಾಮತ್ ಕವಿತೆ ರಚಿಸಿ ಹಾಡಿದರು. ಉಪಾಧ್ಯಕ್ಷ ಆರ್. ಲೋಹಿದಾಸ್ ವಂದನಾರ್ಪಣೆಗೈದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top