ಪುತ್ತೂರು: ವೃತ್ತಿಪರ ಕೋರ್ಸ್ ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2024ರಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಇಂಜಿನಿಯರಿಂಗ್ ವಿಭಾಗದಲ್ಲಿ 550ನೇ ರಾಂಕ್ ಗಳಿಸಿದ ವಿಂಧ್ಯಾ ಕಾರಂತ್, 743ನೇ ರಾಂಕ್ ಗಳಿಸಿದ ಗಮನಗೌರಿ ಎಸ್.ಎಂ. ಹಾಗೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹೆತ್ತವರನ್ನು ಉಪಪ್ರಾಂಶುಪಾಲರಾದ ಶ್ರೀ ದೇವಿಚರಣ್ ರೈ ಇವರ ನೇತೃತ್ವದಲ್ಲಿ, ಉಪನ್ಯಾಸಕ ವೃಂದದವರು ಸನ್ಮಾನಿಸಿ ಶುಭಕೋರಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ದಯಾಮಣಿ ಟಿ.ಕೆ ನಿರೂಪಿಸಿದರು.
ವಿದ್ಯಾರ್ಥಿಗಳ ವಿಶೇಷ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ