18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭ

Upayuktha
0

 



ಹೊಸದಿಲ್ಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.  ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಮತ್ತು ದೃಢೀಕರಣ ನಡೆಯಲಿದೆ.  ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್  ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.



ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ.  ಮುಂದಿನ ತಿಂಗಳು 3ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.




Post a Comment

0 Comments
Post a Comment (0)
To Top