ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ: ನಳಿನ್ ಕುಮಾರ್ ಕಟೀಲ್

Upayuktha
0


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಭೂತಪೂರ್ವ ಜಯ ದೊರೆತಿದೆ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮ ಪ್ರತಿದಿನಗಳ ಜೊತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   


ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮುಂದೆ ಕ್ಯಾ.ಬ್ರಿಜೇಶ್ ಚೌಟರ ನೇತೃತ್ವದಲ್ಲಿ ಎಲ್ಲರ ಸಹಕಾರದೊಂದಿಗೆ ಮುಂದುವರಿಯುವ ವಿಶ್ವಾಸವಿದೆ. ರಾಜ್ಯದಲ್ಲಿಯೂ ನಿರೀಕ್ಷೆ ಯಂತೆ ಬಿಜೆಪಿ 17ಕ್ಷೇತ್ರದಲ್ಲಿ ಜಯಗಳಿಸಿದೆ. ದೇಶದಲ್ಲಿ ಎನ್‌ಡಿಎ ನೇತೃತ್ವದ ಸರಕಾರ ರಚನೆಯಾಗಲಿದೆ. 295 ಕ್ಷೇತ್ರಗಳಲ್ಲಿ ಮತದಾರರು ಎನ್‌ಡಿಎ ಸರಕಾರವನ್ನು ಬೆಂಬಲಿಸಿದ್ದಾರೆ. ಇದರಿಂದಾಗಿ ಸರಳ ಬಹುಮತದೊಂದಿಗೆ ಮತ್ತೊಮ್ಮೆ ಎನ್‌ಡಿಎ ಸರಕಾರ ಅಧಿಕಾರ ಪಡೆದಿದೆ.


ಕೇರಳ ರಾಜ್ಯದಲ್ಲಿ ನಾನು ಚುನಾವಣಾ ಕೆಲಸಲ್ಲಿ ತೊಡಗಿಸಿಕೊಂಡಿರುತ್ತೇನೆ. ಈ ಬಾರಿ ಪ್ರಥಮ ಬಾರಿಗೆ ತ್ರಿಶೂರಿನಲ್ಲಿ ಬಿಜೆಪಿ ಖಾತೆ ತೆರೆದಿರುವುದಕ್ಕೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top