ಸುರತ್ಕಲ್: ಮಾದಕ ವಸ್ತುಗಳ ಬಳಕೆಯು ಯುವ ಜನರ ಜೀವನವನ್ನೇ ನಾಶ ಮಾಡುತ್ತದೆ. ಸಾಮಾಜಿಕವಾಗಿಯೂ ಹಿಂಸಾತ್ಮಕ ಕೃತ್ಯಗಳನ್ನು ಮಾಡುವಂತೆ ಪ್ರೇರಪಿಸುವ ಮಾದಕ ದ್ರವ್ಯಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ. ನುಡಿದರು.
ಅವರು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಗೋವಿಂದ ದಾಸ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ್ದ ರಾಷ್ಟೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣಿಕೆಯ ವಿರುದ್ಧದ ಅಂತರಾಷ್ಟೀಯ ದಿನದ ಅಂಗವಾಗಿ ನಡೆದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಯುವ ಜನರು ರಾಷ್ಟೀಯ ಶಕ್ತಿ. ಯುವ ಶಕ್ತಿಯು ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಯುವ ಜನರು ಗರಿಷ್ಟ ಸಂಖ್ಯೆಯಲ್ಲಿ ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನದಲ್ಲಿ ಭಾಗವಹಿಸುವುದು ಮುಖ್ಯವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ನುಡಿದರು.
ರಾಷ್ಟೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ಡಾ. ಭಾಗ್ಯಲಕ್ಷಿ ಸ್ವಾಗತಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು. ಗ್ರಂಥಪಾಲಕಿ ಡಾ. ಸುಜಾತ ಬಿ., ಉಪನ್ಯಾಸಕಿ ಅಪೇಕ್ಷಾ ಭಂಡಾರಿ, ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
