ಸುರತ್ಕಲ್: ಪ್ರಸಕ್ತ ಸಂದರ್ಭದಲ್ಲಿ ಕೈಗಾರಿಕಾ ಕ್ಷೇತ್ರಗಳಲ್ಲಿ ರಸಾಯನ ಶಾಸ್ತ್ರಜ್ಞರಿಗೆ ಬಹು ಬೇಡಿಕೆಯಿದ್ದು ವಿದ್ಯಾರ್ಥಿಗಳು ವೃತ್ತಿ ಪರ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಧಾಕರ್ ವೈ.ಎನ್ ಅಭಿಪ್ರಾಯಪಟ್ಟರು. ಅವರು ಭೌತಿಕ ರಸಾಯನ ಶಾಸ್ತ್ರಕ್ಕೆ ಸಂಬಂಧಿಸಿದ “ಎಲೆಕ್ಟ್ರೊಕೆಮಿಕಲ್ ವರ್ಕ್ ಸ್ಟೇಶನ್ಸ್ : ರೆವೊಲ್ಯೂಶನೈಸಿಂಗ್ ಸೈಂಟಿಫಿಕ್ ಎಕ್ಸ್ಪ್ಲೋರೇಶನ್ ಎಕ್ರಾಸ್ ಡಿಸಿಪ್ಲಿನ್ಸ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಅವರು ಗೋವಿಂದ ದಾಸ ಕಾಲೇಜಿನ ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಆಯೋಜಿಸಿದ್ದ ವಿಶ್ವನಾಥ ಪಿ. ಶೆಟ್ಟಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ – 2 ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮುಖ್ಯ ಅತಿಥಿ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕರಾದ ಪ್ರೊ. ಗೋಪಾಲ ಎಂ. ಗೋಖಲೆ ಮಾತನಾಡಿ, ವಿದ್ಯಾರ್ಥಿಗಳು ಕಲಾಸಕ್ತಿ ಮತ್ತು ಸಂಶೋಧನಾಸಕ್ತಿ ಬೆಳೆಸಿಕೊಂಡು ವೃತ್ತಿ ಮೌಲ್ಯವನ್ನು ಉತ್ತಮ ಪಡಿಸಿಕೊಳ್ಳಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಉದ್ಯಮಿ ವಿಶ್ವನಾಥ ಪಿ. ಶೆಟ್ಟಿಯವರು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಮೂಲಕ ನೂತನ ರಸಾಯನ ಶಾಸ್ತ್ರ ವಿಚಾರಗಳನ್ನು ಅರಿತುಕೊಳ್ಳಬೇಕೆಂದರು. ಕಾರ್ಯಕ್ರಮ ಸಂಯೋಜಕ ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕಾರ್ತಿಕ ಜೆ.ಎಸ್. ಸ್ವಾಗತಿಸಿದರು. ಉಪನ್ಯಾಸಕಿ ನಿರೀಕ್ಷಾ ಪಿ. ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಕ್ಯಾರೋಲಿನ್ ವೆನಿಸ್ಸಾ ಪಿಂಟೋ ವಂದಿಸಿದರು. ಸಂಜನಾ ರಾವ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


